March 24, 2023

Diwali : ದೀಪಾವಳಿಯ ಮಹತ್ವ ತಿಳಿದುಕೊಳ್ಳಿ.

Share News

ದೀಪಾವಳಿ( diwali) (ದೀಪಗಳ ಸಾಲು) ದೀಪಗಳಿಂದ ದೀಪಗಳನ್ನು ಹಚ್ಚುವ ಹಬ್ಬ. ಇದನ್ನು ವಿಕ್ರಮಶಕೆಯ ವರ್ಷದ ಕೊನೆಯಲ್ಲಿ ಆಚರಿಸಲಾಗುತ್ತದೆ. ವಿಕ್ರಮಶಕೆ ಉತ್ತರ ಭಾರತದಲ್ಲಿ ಉಪಯೋಗಿಸಲ್ಪಡುವುದರಿಂದ ಅಲ್ಲಿ ದೀಪಾವಳಿ ಹೊಸ ವರ್ಷದ ಹಬ್ಬವೂ ಹೌದು. ಭಾರತದಲ್ಲಿ ಸಾಂಪ್ರದಾಯಿಕವಾಗಿ ಪಂಚಾಂಗ ಚಂದ್ರಮಾನವನ್ನು ಅವಲಂಬಿಸಿವೆ. ಅಂದರೆ ಆಶ್ವಯುಜ ಮಾಸ ಕೃಷ್ಣಪಕ್ಷದ ಚತುರ್ದಶಿ, ಅಮಾವಾಸ್ಯೆ ಹಾಗೂ ಕಾರ್ತಿಕ ಮಾಸ ಶುಕ್ಲಪಕ್ಷದ ಪಾಡ್ಯ – ಈ ದಿನಗಳಲ್ಲಿ ದೀಪಾವಳಿಯನ್ನು ಆಚರಿಸಲಾಗುತ್ತಿದೆ.

Diwali: ರಾಮ ಸೀತೆಯ ನಂಟಿದೆ, ಈ ದೀಪಾವಳಿ ಹಬ್ಬಕ್ಕೆ.

ಶ್ರೀ ರಾಮ ರಾವಣನನ್ನು ಗೆದ್ದು ಸೀತೆ ಮತ್ತು ಲಕ್ಷ್ಮಣರೊಂದಿಗೆ ಅಯೋಧ್ಯೆಗೆ ಮರಳಿದ ಸಮಯವೆಂದು ದೀಪಾವಳಿಯನ್ನು ಕೆಲವರು ಆಚರಿಸುತ್ತಾರೆ, ಅಮಾವಾಸ್ಯೆಯ ಹಿಂದಿನ ದಿನ (ನರಕ ಚತುರ್ದಶಿ) ಶ್ರೀಕೃಷ್ಣ ನರಕಾಸುರನನ್ನು ಸಂಹರಿಸಿದ ದಿನ ಎಂದು ಹೇಳಲಾಗುತ್ತದೆ. ಒಟ್ಟಿನಲ್ಲಿ ದೀಪಾವಳಿಯಲ್ಲಿ ಕೇಡಿನ ಮೇಲೆ ಶುಭದ ವಿಜಯವನ್ನು ಆಚರಿಸಲಾಗುತ್ತದೆ.

Diwali: ಇದು ಗೊತ್ತಾ ನಿಮಗೆ.



ಹಿಂದೂ ಧರ್ಮದಜನರು ಪ್ರತಿ ವರ್ಷವೂ ಪ್ರಪಂಚದಿ ಎಲ್ಲೆಡೆ ದೀಪಾವಳಿಯನ್ನು ವಿಜೃಂಭಣೆಯಿಂದ ಆಚರಿಸುತ್ತಾರೆ. ಹೊಸ ಬಟ್ಟೆಗಳು, ಸಿಹಿ ತಿಂಡಿಗಳು ಎಲ್ಲಕ್ಕೂ ಹೆಚ್ಚಾಗಿ ಪಟಾಕಿಗಳಿಗೆ ದೀಪಾವಳಿ ಪ್ರಸಿದ್ಧ. ಉತ್ತರ ಭಾರತದಲ್ಲಿ ದೀಪಾವಳಿಯ ಸಮಯವೇ ಹೊಸ ಆರ್ಥಿಕ ವರ್ಷದ ಪ್ರಾರಂಭ ಸಹ; ಹೊಸ ಲೆಕ್ಕದ ಪುಸ್ತಕಗಳನ್ನು ಈ ಸಮಯದಲ್ಲೇ ತೆರೆಯಲಾಗುತ್ತದೆ.

ಅಕ್ಟೋಬರ್ 27ಕ್ಕೆ ರಾಜ್ಯಾದ್ಯಂತ ರಸ್ತೆ ಬಂದ್…!



ದೀಪಾವಳಿಯ ಅಂಗವಾಗಿ ನಡೆಯುವ ಇತರ ಸಮಾರಂಭಗಳಲ್ಲಿ ಆಯುಧಪೂಜೆ ಮತ್ತು ಗೋಪೂಜೆಗಳನ್ನು ಹೆಸರಿಸಬಹುದು.

ದಕ್ಷಿಣ ಭಾರತದಲ್ಲಿ ಸಾಮಾನ್ಯವಾಗಿ ಮೂರು ದಿನಗಳ ಆಚರಣೆ ನಡೆಯುತ್ತದೆ. ದಕ್ಷಿಣ ಭಾರತದಲ್ಲಿ ನರಕ ಚತುರ್ದಶಿ ಪ್ರಮುಖವಾದರೆ, ಉತ್ತರ ಭಾರತದಲ್ಲಿ ಅಮಾವಾಸ್ಯೆಯಂದು ಆಚರಿಸಲಾಗುವ ಲಕ್ಷ್ಮಿ ಪೂಜೆ ಮುಖ್ಯವಾದದ್ದು.

ವೀಕ್ಷಕರಲ್ಲಿ ವಿನಂತಿ: ನಮ್ಮ ಕೃಷಿ ಜಗತ್ತು ವೆಬ್ಸೈಟ್ ಗೆ ಭೇಟಿ ನೀಡಿದಾಗ, SCREEN ಮೇಲೆ ಬರುವ, NOTIFICATION BUTTON ನ್ನು ALLOW ಒತ್ತಿರಿ. ಮತ್ತು SUBSCRIBE ಮಾಡಿಕೊಂಡರೆ, ನಾವು ಹಾಕುವ ಎಲ್ಲಾ ಮಾಹಿತಿಗಳು ನಿಮ್ಮ ಮೊಬೈಲ್ ಗೆ ನೇರವಾಗಿ ಸಂದೇಶದ ಮೂಲಕ ಬರುತ್ತವೆ.


Share News

Malatesh

Hey I'm malatesh, from karnataka india... This website includes Agriculture, horticulture, vetarnary, latest news informations.

View all posts by Malatesh →

Leave a Reply

Your email address will not be published. Required fields are marked *